ಗ್ರಾಮೀಣ ಆಟಗಳು

 ಗ್ರಾಮೀಣ ಆಟಗಳು

ಗ್ರಾಮೀಣ ಜನರಿಂದ ಮನೋರಂಜನೆಗಾಗಿ, ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಇವು ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿರುವುದು.

ಲಗೋರಿ ಆಟ

ಈ ಆಟವನ್ನು ಇಬ್ಬರಿಗಿಂತ ಹೆಚ್ಚಾಗಿ ಎಷ್ಟು ಜನರು ಕೂಡ ಆಡಬಹುದು. ಅವರನ್ನು ಎರಡು ತಂಡಗಳಲ್ಲಿ ವಿಭಜಿಸಿವವರು. ಮೊದಲನೆಯ ತಂಡದವರು ೭ ರಿಂದ ೯ ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸುವರು. ಹಾಗೆ ಜೋಡಿಸಿದ ಕಲ್ಲುಗಳಿಗೆ ಸ್ವಲ್ಪದೂರದಿಂದ ಮತ್ತೊಂದು ತಂಡದವರು ಒಂದು ಚೆಂಡನ್ನು ಎಸೆಯುವರು. ಆ ಚೆಂಡು ತಾಗಿ ಕಲ್ಲುಗಳು ಚದುರಿದಾಗ, ಮೊದಲನೆಯ ತಂಡದವರು ಅದನ್ನು ಮತ್ತೆ ಯಥಾಸ್ಥಿತಿಗೆ ತರಲು ಪ್ರಯತ್ನಿಸುವರು. ಅದನ್ನು ತಡೆಯುವುದೇ ಎದುರಾಳಿ ತಂಡದ ಗುರಿ.


ಮೊದಲನೆಯ ತಂಡದವರು ಆ ಕಲ್ಲುಗಳನ್ನು ಜೋಡಿಸುವ ಪ್ರಯತ್ನದಲ್ಲಿರುವಾಗ ಎದುರಾಳಿ ತಂಡದವರು ಆ ಚೆಂಡನ್ನು ಯಾರೊಬ್ಬರಿಗೆ ತಾಗುವಂತೆ ಎಸೆದರೆ, ತಾಗಿದಾತ ಆಟದಿಂದ ಹೊರಗೆ ಹೋಗುತ್ತಾನೆ. ಹೀಗೆ ಎದುರಾಳಿಯ ಪ್ರತಿಯೊಬ್ಬರನ್ನು ಆಟದಿಂದ ಹೊರ ಕಳುಹಿಸುವುದೇ ಆಟದ ಗುರಿ. ಈ ಸಮಯದಲ್ಲಿ ಎದುರಾಳಿ ತಂಡವೇನಾದರು ಕಲ್ಲುಗಳನ್ನು ಜೋಡಿಸುವುದರಲ್ಲಿ ಯಶಸ್ವಿಯಾದಲ್ಲಿ ಆ ತಂಡವೇ ಈ ಆಟದಲ್ಲಿ ವಿಜಯಿಗಳು.



No comments:

Post a Comment